Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:3 - ಪರಿಶುದ್ದ ಬೈಬಲ್‌

3 ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಮುಖ್ಯ ಯಾಜಕಾ ಅನಿ ಜಾನ್ತಿ ಲೊಕಾ ಕಾಯಿಫಾಸ್ ಮನ್ತಲ್ಯಾ ಮಹಾಯಾಜಕಾಚ್ಯಾ ಘರಾಕ್ಡೆ ಜಮ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:3
23 ತಿಳಿವುಗಳ ಹೋಲಿಕೆ  

ಆಗ ಅನ್ನನು ಯೇಸುವನ್ನು ಮತ್ತೆ ಕಟ್ಟಿಸಿ, ಪ್ರಧಾನಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.


ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.


ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.


ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು.


ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.


ಆ ಸಮಯದಲ್ಲಿ ಪೇತ್ರನು ಇನ್ನೂ ಅಂಗಳದಲ್ಲಿದ್ದನು. ಪ್ರಧಾನಯಾಜಕನ ದಾಸಿಯಾಗಿದ್ದ ಹುಡುಗಿಯೊಬ್ಬಳು ಪೇತ್ರನ ಬಳಿಗೆ ಬಂದಳು.


ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು.


ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು