Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:32 - ಪರಿಶುದ್ದ ಬೈಬಲ್‌

32 ಆದರೆ ನಾನು ಸತ್ತಮೇಲೆ ಜೀವಂತನಾಗಿ ಎದ್ದುಬರುವೆನು. ನಂತರ ನಾನು ಗಲಿಲಾಯಕ್ಕೆ ಹೋಗುವೆನು. ನೀವು ಅಲ್ಲಿಗೆ ಹೋಗುವುದಕ್ಕಿಂತ ಮುಂಚೆಯೇ ನಾನು ಅಲ್ಲಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಾನಾದರೋ ಪುನರುತ್ಥಾನಹೊಂದಿ ನಿಮಗಿಂತ ಮುಂದಾಗಿ ಗಲಿಲೇಯಕ್ಕೆ ಹೋಗುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ನಾನು ಎದ್ದ ಮೇಲೆ, ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಮಿಯಾ ಝಿತ್ತೊ ಹೊವ್ನ್ ಉಟಲ್ಲ್ಯಾ ತನ್ನಾ ತುಮ್ಚ್ಯಾನ್ಕಿ ಅದ್ದಿ ಗಾಲಿಲಿಯಾ ಮನ್ತಲ್ಯಾ ಜಾಗ್ಯಾಕ್ ಜಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:32
13 ತಿಳಿವುಗಳ ಹೋಲಿಕೆ  

ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.


ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.


ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.


ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.


ಆದರೆ ನಾನು ಸತ್ತು ಪುನರುತ್ಥಾನ ಹೊಂದಿದ ಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತೇನೆ” ಎಂದನು.


ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.


ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು