ಮತ್ತಾಯ 26:36 - ಪರಿಶುದ್ದ ಬೈಬಲ್36 ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಅತ್ತಲಾಗಿ ಹೋಗಿ ಪ್ರಾರ್ಥನೆ ಮಾಡಿ ಬರುತ್ತೇನೆ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಮಾನಾ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಗೆತ್ಸೆಮನಿ ಮನ್ತಲ್ಯಾ ಮಳ್ಯಾಕ್ ಗೆಲೊ, ಅನಿ ತೆಂಕಾ,“ಮಿಯಾ ಉಲ್ಲೆ ಫಿಡೆ ಜಾವ್ನ್ ಮಾಗ್ನಿ ಕರ್‍ತಾ ತುಮಿ ಹಿತ್ತೆಚ್ ಬಸಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.