ಮತ್ತಾಯ 26:45 - ಪರಿಶುದ್ದ ಬೈಬಲ್45 ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತನ್ನಾ ತೊ ಅಪ್ನಾಚ್ಯಾ ಶಿಸಾನಿಕ್ಡೆ ಪರ್ತುನ್ ಯೆಲೊ, ಅನಿ. “ಅಜುನ್‍ಬಿ ತುಮಿ ನಿಜುನ್ ಅರಾಮ್ ಕರುಕ್ ಲಾಗ್ಲ್ಯಾಶಿ? ಅಬಕಾ! ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಿತ್ ಒಪಸ್ತಲೊ ಎಳ್ ಯೆಲೊ”. ಅಧ್ಯಾಯವನ್ನು ನೋಡಿ |
ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.