Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:50 - ಪರಿಶುದ್ದ ಬೈಬಲ್‌

50 ಆಗ ಯೇಸು, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸ ಇದೆಯೋ?” ಎಂದನು. ಕೂಡಲೇ ಆ ಜನರು ಬಂದು ಯೇಸುವನ್ನು ಹಿಡಿದು, ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಯೇಸು ಅವನಿಗೆ, “ಮಿತ್ರಾ, ನೀನು ಮಾಡಬಂದ ಕಾರ್ಯವನ್ನು ಮಾಡಿಮುಗಿಸು,” ಎಂದರು. ಆಗ ಆ ಜನರು ಹತ್ತಿರಕ್ಕೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೇಸು ಅವನಿಗೆ - ಗೆಳೆಯನೇ, ನೀನು ಬಂದ ಕೆಲಸ ಇದೇಯೋ? ಎಂದು ಹೇಳಲು ಅವರು ಹತ್ತರಕ್ಕೆ ಬಂದು ಯೇಸುವಿನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅದಕ್ಕೆ ಯೇಸು ಅವನಿಗೆ, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸವನ್ನು ಮುಗಿಸು,” ಎಂದು ಹೇಳಿದರು. ಕೂಡಲೇ ಆ ಜನರು ಮುಂದೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಜೆಜುನ್ ತೆಕಾ, “ಮಾಜ್ಯಾ ದೊಸ್ತಾ, ತಿಯಾ ಕಾಯ್ ಕರುಚೆ ಮನುನ್ ಯೆಲೆ ತೆ ಕಾಮ್ ಲಗ್ಗುನಾಚ್ ಕರುನ್ ಸಾರ್,” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ತ್ಯಾ ಲೊಕಾನಿ ಯೆವ್ನ್ ಜೆಜುಕ್ ಧರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:50
6 ತಿಳಿವುಗಳ ಹೋಲಿಕೆ  

“ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?


‘ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.


ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುವಿಯೋ?” ಎಂದು ಕೇಳಿದನು.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಅಬ್ಷಾಲೋಮನು, “ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು