Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:53 - ಪರಿಶುದ್ದ ಬೈಬಲ್‌

53 ನಾನು ನನ್ನ ತಂದೆಯನ್ನು ಕೇಳಿದ್ದರೆ, ಆತನು ನನಗೆ ದೇವದೂತರ ಹನ್ನೆರಡು ಸೇನಾದಳಗಳನ್ನು ನೀಡುತ್ತಿದ್ದನೆಂಬುದು ನಿನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 “ಮಿಯಾ ಮಾಜ್ಯಾ ಬಾಬಾಕ್ಡೆ ಮಾಗಟ್ಲ್ಯಾರ್ ತೊ ಮಾಜ್ಯಾ ಮಜತಿಕ್ ಮನುನ್ ಸೈನಿಕಾಂಚ್ಯಾ ಬಾರಾ ತಾಂಡ್ಯಾಂನ್ಚ್ಯಾನ್ಕಿ ಜಾಸ್ತಿ ದೆವಾಚ್ಯಾ ದುತಾಕ್ನಿ ಧಾಡಿನಸ್ತಾನಾ ರ್‍ಹಾತಾ ಮನುನ್ ತಿಯಾ ಚಿಂತ್ಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:53
12 ತಿಳಿವುಗಳ ಹೋಲಿಕೆ  

ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.


ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ಸೇವಕನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು!


“ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅವನು “ನನ್ನ ಹೆಸರು ದಂಡು, ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.


ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು