ಮತ್ತಾಯ 26:56 - ಪರಿಶುದ್ದ ಬೈಬಲ್56 ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಖರೆ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಸಾಂಗಲ್ಲೆ ಪುರಾ ಹೊವ್‍ಸಾಟ್ನಿ ಅಶೆ ಸಗ್ಳೆ ಹೊಲೆ.” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ಸಗ್ಳಿ ಶಿಸಾ ಜೆಜುಕ್ ಸೊಡುನ್ ಪಳುನ್ ಗೆಲಿ. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.