ಮತ್ತಾಯ 26:61 - ಪರಿಶುದ್ದ ಬೈಬಲ್61 “ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 “ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 “ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 “ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್61 “ಹ್ಯೊ ಮಾನುಸ್, ದೆವಾಚಿ ಗುಡಿ ಪಾಡ್ವುನ್ ತಿನ್ ದಿಸಾತ್ನಿ ಅನಿಪರ್‍ತುನ್ ಭಾಂದ್ತಾ ಮನುನ್ ಸಾಂಗುಕ್ ಲಾಗಲ್ಲೊ.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.