Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:63 - ಪರಿಶುದ್ದ ಬೈಬಲ್‌

63 ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ಖರೆ ಜೆಜು ಗಪ್ಪುಚ್ ಹೊತ್ತೊ. ತನ್ನಾ ಮಹಾಯಾಜಕಾನ್, “ಮಿಯಾ ಝಿತ್ತ್ಯಾ ದೆವಾಚ್ಯಾ ಆನೆನ್ ತುಕಾ ಇಚಾರುಲಾ, ತಿಯಾ ದೆವಾಚೊ ಲೆಕ್ ಕ್ರಿಸ್ತ್ ಹೊಲ್ಯಾರ್ ಅಮ್ಕಾ ಸಾಂಗ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:63
42 ತಿಳಿವುಗಳ ಹೋಲಿಕೆ  

“ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲಿ ಕೇಳಿದ್ದನ್ನಾಗಲಿ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.


ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.


ಯೆಹೂದ್ಯರು, “ಹಾಗಾದರೆ, ನೀನು ಯಾರು?” ಎಂದು ಕೇಳಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿಂದ ತಿಳಿಸುತ್ತಾ ಬಂದೆನೋ, ಆತನೇ ನಾನು.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


“ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.


ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು.


ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.


ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.


ಆಗ ಅಹಾಬನು ಮೀಕಾಯೆಹುವಿಗೆ, “ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ” ಎಂದು ಹೇಳಿದಾಗ ಮೀಕಾಯೆಹುವು,


ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.


ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.


ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?


ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.


ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು.


ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು