73 ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.
73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
73 ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.
73 ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -
ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
ಪುನಃ ಪೇತ್ರನು ಆಕೆಯ ಮಾತನ್ನು ನಿರಾಕರಿಸಿದನು. ಸ್ವಲ್ಪ ಸಮಯದ ನಂತರ, ಪೇತ್ರನ ಬಳಿ ನಿಂತಿದ್ದ ಕೆಲವು ಜನರು ಅವನಿಗೆ, “ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ನೀನೂ ಒಬ್ಬನು ಎಂಬುದು ನಮಗೆ ತಿಳಿದಿದೆ. ನೀನು ಯೇಸುವಿನಂತೆ ಗಲಿಲಾಯದವನು” ಎಂದರು.
ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು!