Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:8 - ಪರಿಶುದ್ದ ಬೈಬಲ್‌

8 ಇದನ್ನು ನೋಡಿದ ಶಿಷ್ಯರು ಆ ಸ್ತ್ರೀಯ ಮೇಲೆ ಕೋಪಗೊಂಡು, “ಆ ಸುಗಂಧತೈಲವನ್ನು ಏಕೆ ಹಾಳು ಮಾಡಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕಂಡ ಶಿಷ್ಯರು ಸಿಟ್ಟಿಗೆದ್ದರು. “ಏಕೆ ಇಷ್ಟೊಂದು ವ್ಯರ್ಥ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶಿಷ್ಯರು ಇದನ್ನು ಕಂಡು ಕೋಪಗೊಂಡು - ಈ ನಷ್ಟ ಯಾತಕ್ಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆಜುಚ್ಯಾ ಶಿಸಾಕ್ನಿ ಹೆ ಬಗುನ್ ರಾಗ್ ಯೆಲೊ, ಅನಿ ತೆನಿ, “ಕಶ್ಯಾಕ್ ಹೆ ಎವ್ಡೆ ಸಗ್ಳೆ ಹಾಳ್ ಘಾಲ್ತಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:8
12 ತಿಳಿವುಗಳ ಹೋಲಿಕೆ  

ಅಲ್ಲಿದ್ದ ಕೆಲವು ಶಿಷ್ಯರು ಇದನ್ನು ನೋಡಿ ಕೋಪಗೊಂಡು ಆಕ್ಷೇಪಿಸಿದರು. “ಆ ಪರಿಮಳತೈಲವನ್ನು ಹಾಳುಮಾಡಿದ್ದೇಕೆ?


ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.


ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಆ ಸುಗಂಧ ತೈಲವನ್ನು ಸುರಿದಳು.


ಅದನ್ನು ಬಹಳ ಹಣಕ್ಕೆ ಮಾರಿ ಬಡ ಜನರಿಗೆ ಕೊಡಬಹುದಾಗಿತ್ತಲ್ಲಾ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು