ಮತ್ತಾಯ 27:1 - ಪರಿಶುದ್ದ ಬೈಬಲ್1 ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಕ್ಕಾಳಿ ಫಿಡೆ ಸಗ್ಳ್ಯಾ ಮುಖ್ಯ ಯಾಜಕಾನಿ ಅನಿ ಜುದೆವ್ ಲೊಕಾಂಚ್ಯಾ ಜಾನ್ತ್ಯಾನಿ ಮಿಳುನ್ ಜೆಜುಕ್ ಕಶೆ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.
ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.