Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:13 - ಪರಿಶುದ್ದ ಬೈಬಲ್‌

13 ಆದ್ದರಿಂದ ಪಿಲಾತನು ಯೇಸುವನ್ನು, “ಈ ಜನರು ನಿನ್ನ ಮೇಲೆ ಹೇಳುತ್ತಿರುವ ಈ ದೂರುಗಳನ್ನೆಲ್ಲ ನೀನು ಕೇಳುತ್ತಿದ್ದರೂ ಏಕೆ ಉತ್ತರ ಕೊಡುತ್ತಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಪಿಲಾತನು, “ಇವರು ನಿನಗೆ ವಿರುದ್ಧ ಇಷ್ಟೆಲ್ಲಾ ಹೇಳುತ್ತಿರುವುದು ನಿನಗೆ ಕೇಳಿಸುತ್ತಿಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಪಿಲಾತನು ಆತನನ್ನು - ಇವರು ನಿನ್ನ ಮೇಲೆ ಎಷ್ಟು ಸಾಕ್ಷಿ ಹೇಳುತ್ತಾರೆ, ನೀನು ಕೇಳುವದಿಲ್ಲವೋ? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಪಿಲಾತಾನ್ ಜೆಜುಕ್,“ ಹೆನಿ ತುಜೆ ವರ್‍ತಿ ಘಾಲ್ತಲಿ ಅಪ್ವಾದಾ ತುಕಾ ಆಯ್ಕೊ ಯೆಯ್ ನಾ ಹೊಲ್ಯಾತ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:13
5 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು.


ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.


ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.


ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.


ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು