ಮತ್ತಾಯ 27:17 - ಪರಿಶುದ್ದ ಬೈಬಲ್17 ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17-18 ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆಚೆಸಾಟ್ನಿ ಲೊಕಾ ಥೈ ಜಮಾ ಹೊಲ್ಲ್ಯಾ ತನ್ನಾ, ಪಿಲಾತಾನ್ ತೆಂಕಾ, “ತುಮ್ಚ್ಯಾಸಾಟ್ನಿ ಮಿಯಾ ಕೊನಾಕ್ ಸೊಡುನ್ ದಿವ್ಚೆ? ಬಾರಾಬ್ಬಾಸಾಕ್ ಕಾಯ್ ಕ್ರಿಸ್ತ್ ಮನ್ತಲ್ಯಾ ಜೆಜುಕ್ ಸೊಡುನ್ ದಿವ್ಚೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.