Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:18 - ಪರಿಶುದ್ದ ಬೈಬಲ್‌

18 ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುದೆವಾಂಚ್ಯಾ ಮುಖಂಡಾನಿ ಕುಸ್ಡೆಪಾನಾನಿ ಜೆಜುಕ್ ಧರುನ್ ಹಾನಲ್ಲ್ಯಾನಿ ಮನುನ್ ಪಿಲಾತಾಕ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:18
13 ತಿಳಿವುಗಳ ಹೋಲಿಕೆ  

ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.


ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು