Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:19 - ಪರಿಶುದ್ದ ಬೈಬಲ್‌

19 ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಿಲಾತ್ ನ್ಯಾಯ್‍ ಕರ್‍ತಲ್ಯಾ ಜಾಗ್ಯಾರ್ ಬಸಲ್ಲೊ ಹೊತ್ತೊ ತನ್ನಾ ತೆಚ್ಯಾ ಬಾಯ್ಕೊನ್,“ತಿಯಾ ತ್ಯಾ ಚುಕೆತ್ ನಸಲ್ಲ್ಯಾ ಮಾನ್ಸಾಕ್ ಕಾಯ್ಬಿ ಕರುಕ್ ಜಾವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ರಾತ್ತಿ ಸಪ್ನಾತ್ ಮಿಯಾ ಹೆಚ್ಯಾ ಬದಲ್ ಲೈ ಕಾಯ್ ಕಾಯ್‍ಕಿ ಸೊಸ್ಲಾ” ಮನುನ್ ಖಬರ್ ಧಾಡುನ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:19
28 ತಿಳಿವುಗಳ ಹೋಲಿಕೆ  

ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


“ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ. ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”


ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.


ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,


ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ.


ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.


ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ಅವರನ್ನು ನ್ಯಾಯಾಲಯದಿಂದ ಹೊರಡಿಸಿದನು.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.


ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.


“ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಆ ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು