ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.
ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.
ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.
ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.
ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.
ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.
ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.
ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.