ಮತ್ತಾಯ 27:20 - ಪರಿಶುದ್ದ ಬೈಬಲ್20 ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅತ್ತಲಾಗಿ ಮಹಾಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟು ಕೊಡಬೇಕೆಂದು ಬೇಡಿಕೊಳ್ಳುವ ಹಾಗೂ ಯೇಸುವನ್ನು ನಾಶಗೊಳಿಸುವ ಹಾಗೂ ಜನರನ್ನು ಒಡಂಬಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಹಿಕ್ಡಿ ಮುಖ್ಯ ಯಾಜಕಾನಿ ಅನಿ ಜಾನ್ತ್ಯಾನಿ ಲೊಕಾಂಚ್ಯಾ ತಾಂಡ್ಯಾಕ್, ಬಾರಾಬ್ಬಾಸಾಕ್ ಸೊಡ್ ಅನಿ ಜೆಜುಕ್ ಕುರ್ಸಾರ್ ಮಾರ್ ಮನುನ್ ಪಿಲಾತಾಕ್ಡೆ ಮಾಗಾ ಮನುನ್ ಸಾಂಗುನ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |