Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:23 - ಪರಿಶುದ್ದ ಬೈಬಲ್‌

23 ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಪಿಲಾತಾನ್,“ತೆನಿ ಕಾಯ್ ಚುಕ್ ಕರ್‍ಲ್ಯಾನಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಜೊರಾನಿ “ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:23
16 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,


ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.


ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು