ಮತ್ತಾಯ 27:24 - ಪರಿಶುದ್ದ ಬೈಬಲ್24 ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಹೆ ಬಗುನ್ ಪಿಲಾತಾನ್ ಅನಿ ಫಿಡೆ ಬೊಲುನ್ ಉಪ್‌ಯೊಗ್ ನಾ, ಬೊಲ್ಲ್ಯಾರ್ ಡಂಗೊ ಉಟ್ಲ್ಯಾರ್‍ಬಿ ಉಟ್ಲೊ ಮನುನ್ ಯವ್ಜುನ್, ತೆನಿ ಉಲ್ಲೆ ಪಾನಿ ಘೆಟ್ಲ್ಯಾನ್ ಅನಿ ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಅಪ್ನಾಚಿ ಹಾತಾ ಧುವ್ನ್ ಘೆಟ್ಲ್ಯಾನ್, ಅನಿ, “ಹ್ಯಾ ಮಾನ್ಸಾಚ್ಯಾ ಮರ್‍ನಾಕ್ ಮಿಯಾ ಕಾರನ್ ನ್ಹಯ್! ತುಮಿಚ್ ತೆ ಬಗುನ್ ಘೆವಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.