ಮತ್ತಾಯ 27:32 - ಪರಿಶುದ್ದ ಬೈಬಲ್32 ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತೆನಿ ಶಾರಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ ಸಿರೆನ್ ಮನ್ತಲ್ಯಾ ಶಾರಾಚೊ ಸಿಮಾವ್ ಮನ್ತಲೊ ಎಕ್ ಮಾನುಸ್ ತೆಂಕಾ ಗಾವ್ಲೊ. ಸೈನಿಕಾನಿ ತೆಕಾ ಜಬರ್‍ದಸ್ತಿನಿ ಜೆಜುಚೊ ಕುರಿಸ್ ವಾವುನ್ ನ್ಹೆವ್ಕ್ ಲಾವ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.