Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:4 - ಪರಿಶುದ್ದ ಬೈಬಲ್‌

4 “ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 “ಎಕ್ ಚುಕ್ ನಸಲ್ಲ್ಯಾ ಮಾನ್ಸಾಕ್ ಜಿವಾನಿ ಮಾರುಕ್ ಧರುನ್ ದಿವ್ನ್ ಮಿಯಾ ಚುಕ್ ಕರ್‍ಲೊ!” ಮಟ್ಲ್ಯಾನ್. ತನ್ನಾ ತೆನಿ,“ಅಮಿ ಕಶ್ಯಾಕ್ ಹೆಚ್ಯಾ ವಿಶಯಾತ್ ಚಿಂತಾ ಕರುಚೆ? ತುಜೆ ಸಮಸ್ಯೆ ತೆ ತಿಯಾಚ್ ಬಗುನ್ ಘೆ!” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:4
33 ತಿಳಿವುಗಳ ಹೋಲಿಕೆ  

ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


“ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.


ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.


ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿ.


ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.


ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.


ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.


ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು