ಮತ್ತಾಯ 28:2 - ಪರಿಶುದ್ದ ಬೈಬಲ್2 ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಎಗ್ದಮ್ ಮೊಟೆ ಭುಕಂಪ್ ಹೊಲೆ; ಧನಿಯಾಚೊ ಎಕ್ ದುತ್ ಸರ್‍ಗಾ ವೈನಾ ಉತ್ರುನ್ ಯೆಲೊ, ಸಮಾದಿಚ್ಯಾ ದಾರಾರ್ ಹೊತ್ತ್ಯಾ ಗುಂಡ್ಯಾಕ್ ಕಡೆಕ್ ಗುಳ್ವುನ್ ತೆಚೆ ವರ್‍ತಿ ಬಸ್ಲೊ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.