Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:1 - ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾ ಎಳಾರ್ ಜುದೆಯಾ ಮನ್ತಲ್ಯಾ ಪ್ರಾಂತ್ಯಾತ್ ಜುವಾಂವ್ ಬಾವ್ತಿಸ್ ಹೊತ್ತೊ, ತೊ ಡಂಗ್ಳಿತ್ ಶಿಕ್ವುಲಾಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:1
27 ತಿಳಿವುಗಳ ಹೋಲಿಕೆ  

“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


“ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.


ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.


ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?


ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ!


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.


ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


“ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.


ಆದ್ದರಿಂದ ಯೆಹೋಯಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು.


ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು