Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:15 - ಪರಿಶುದ್ದ ಬೈಬಲ್‌

15 ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಜೆಜುನ್ “ಅತ್ತಾ ಸದ್ದ್ಯಾಕ್ ಕಶೆ ಹಾಯ್ ತಸೆಚ್ ರ್‍ಹಾಂವ್ದಿ, ಕಶ್ಯಾಕ್ ಮಟ್ಲ್ಯಾರ್ ಅಶೆ ರ್‍ಹಾಲ್ಯಾರುಚ್ ದೆವಾನ್ ಕಾಯ್ ಕರುಚೆ ಮನುನ್ ಯವಜ್ಲ್ಯಾನಾಯ್ ತೆ ಅಮಿ ಕರುಕ್ ಹೊತಾ.” ಮಟ್ಲ್ಯಾನ್. ತನ್ನಾ ಜುವಾಂವ್ ಜೆಜುಕ್ ಬಾಲ್ತಿಮ್ ದಿವ್ಕ್ ತಯಾರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:15
13 ತಿಳಿವುಗಳ ಹೋಲಿಕೆ  

ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು.


ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.


ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು