Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:1 - ಪರಿಶುದ್ದ ಬೈಬಲ್‌

1 ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಗಿರೊ ಪರಿಕ್ಷಾ ಕರುಕ್ ಮನುನ್ ಪವಿತ್ರ್ ಆತ್ಮ್ಯಾನ್ ಜೆಜುಕ್ ಡಂಗ್ಳಿತ್ ಘೆವ್ನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:1
18 ತಿಳಿವುಗಳ ಹೋಲಿಕೆ  

ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.


ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.


ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.


ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.


ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು