Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:10 - ಪರಿಶುದ್ದ ಬೈಬಲ್‌

10 ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್, “ಸೈತಾನಾ ಮಾಜ್ಯಾಕ್ನಾ ಧುರ್ ಜಾ, ಪವಿತ್ರ್ ಪುಸ್ತಕ್ ಸಾಂಗ್ತಾ, ಸರ್ವೆಸ್ವರಾ ತುಜ್ಯಾ ದೆವಾಚೆ ಎಕ್ಲ್ಯಾಚೆಚ್ ಪಾಯ್ ಪಡ್, ಅನಿ ತೆಚಿ ಎಕ್ಲ್ಯಾಚಿಚ್ ಸೆವಾ ಕರ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:10
30 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


ಅದಕ್ಕೆ ಯೇಸು, “‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ.


ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿದ್ದು ಅವನನ್ನು ಎದುರಿಸಿರಿ. ಯಾಕೆಂದರೆ ಲೋಕದಲ್ಲಿರುವ ನಿಮ್ಮ ಸಹೋದರ ಸಹೋದರಿಯರೆಲ್ಲರೂ ನಿಮಗಿರುವಂಥ ಬಾಧೆಗಳನ್ನು ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.


ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.


ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.


ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.


ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.


ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.


ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.


ಯೇಸು ಅವರಿಗೆ, “ಸೈತಾನನು ಮಿಂಚಿನೋಪಾದಿಯಲ್ಲಿ ಆಕಾಶದಿಂದ ಕೆಳಗೆ ಬೀಳುವುದನ್ನು ನಾನು ನೋಡಿದೆನು.


ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.


ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.


ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು.


“ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)


ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.


ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.


ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.


ಇದು ನಮಗೆ ಆಶ್ಚರ್ಯವಾದದ್ದೇನೂ ಅಲ್ಲ. ಏಕೆಂದರೆ ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುತ್ತಾನೆ.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು