Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:12 - ಪರಿಶುದ್ದ ಬೈಬಲ್‌

12 ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ಜುವಾಂವಾಕ್ ಬಂಧಿಖಾನ್ಯಾತ್ ಘಾಟ್ಲ್ಯಾನಿ ಮನ್ತಲೆ ಆಯಿಕ್ಲ್ಯಾನ್, ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:12
13 ತಿಳಿವುಗಳ ಹೋಲಿಕೆ  

ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,


ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.


ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.


(ಆಗ ಯೋಹಾನನನ್ನು ಇನ್ನೂ ಸೆರೆಮನೆಗೆ ಹಾಕಿರಲಿಲ್ಲ.)


ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.


ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.


ಯೇಸು ಜುದೇಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯವಿದು.


ಎರಡು ದಿನಗಳಾದ ನಂತರ ಯೇಸು ಅಲ್ಲಿಂದ ಗಲಿಲಾಯಕ್ಕೆ ಹೋದನು.


ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು.


ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು