ಮತ್ತಾಯ 4:15 - ಪರಿಶುದ್ದ ಬೈಬಲ್15 “ಜೆಬುಲೋನ್ ಸೀಮೆಯ, ನಫ್ತಾಲಿ ಸೀಮೆಯ, ಜೋರ್ಡನ್ನಿನ ಆಚೆ ಸೀಮೆಯ, ಸಮುದ್ರದ ಕಡೆಗಿರುವ ಸೀಮೆಯ, ಯೆಹೂದ್ಯರಲ್ಲದ ಗಲಿಲಾಯ ಸೀಮೆಯ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಜೆಬುಲೋನ್ ಸೀಮೆ ಮತ್ತು ನೆಫ್ತಲೀಮ್ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 “ಸಮುಂದರಾಚ್ಯಾ ರಸ್ತ್ಯಾ ವರ್‍ತಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಕ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿಚ್ಯಾ ಪ್ರಾಂತ್ಯಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಗಾಲಿಲಿಯಾ! ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.