Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:16 - ಪರಿಶುದ್ದ ಬೈಬಲ್‌

16 ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕಾಳ್ಕಾತ್ ಜಿವನ್ ಕರ್‍ತಲ್ಯಾ ಲೊಕಾನಿ ಎಕ್ ಮೊಟೊ ಉಜ್ವೊಡ್ ಬಗಟ್ಲ್ಯಾನಿ, ಮರ್‍ನಾಚ್ಯಾ ಕಾಳ್ಕಾತ್ ಜಿವನ್ ಕರ್‍ತಲ್ಯಾ ಲೊಕಾಂಚ್ಯಾ ವರ್‍ತಿ ಉಜ್ವೊಡ್ ಫಾಕ್ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:16
14 ತಿಳಿವುಗಳ ಹೋಲಿಕೆ  

ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!’”


ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.


ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.


ಹಿಂದಿನ ಕಾಲದಲ್ಲಿ, ಜೆಬುಲೋನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು