ಮತ್ತಾಯ 4:17 - ಪರಿಶುದ್ದ ಬೈಬಲ್17 ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾಚ್ಯಾನ್ ಜೆಜು ಬರಿ ಖಬರ್ ಸಾಂಗುಕ್‍ಲಾಲೊ. ಅನಿ, “ತುಮ್ಚೆ ಪಾಪಾಚೆ ಜಿವನ್ ಸೊಡಾ, ಸರ್ಗಾಚೊ ರಾಜ್ ಜಗ್ಗೊಳ್ ಯೆವ್ನ್ ಪಾವ್ಲಾ,” ಮನುನ್ ಸಾಂಗುಕ್‍ಲಾಲೊ. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.