Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:18 - ಪರಿಶುದ್ದ ಬೈಬಲ್‌

18 ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರುವಲ್ಲಿ, ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಅಣ್ಣತಮ್ಮಂದಿರಿಬ್ಬರು ಬಲೆಬೀಸುವದನ್ನು ಕಂಡನು; ಅವರು ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ತಮ್ಮನಾದ ಅಂದ್ರೆಯ. ಅವರು ಬೆಸ್ತರು, ಸಮುದ್ರದಲ್ಲಿ ಬಲೆಬೀಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ಜೆಜು ಗಾಲಿಲಿಯಾ ಸಮುಂದರಾಚ್ಯಾ ದಂಡೆನ್ ಚಲುನ್ಗೆತ್ ಜಾತಾನಾ, ಮಾಸೊಳ್ಯಾ ಧರ್‍ತಲೆ ಕಾಮ್ ಕರ್‍ತಲ್ಯಾ ದೊಗೆ ಜಾನಾ ಭಾವಾಕ್ನಿ, ಪೆದ್ರು ಮನ್ತಲ್ಯಾ ಸಿಮಾವಾಕ್, ಅನಿ ತೆಚ್ಯಾ ಭಾವಾಕ್ ಅಂದ್ರುಕ್ ತೆನಿ ಬಗಟ್ಲ್ಯಾನ್. ತೆನಿ ಸಮುಂದರಾತ್ ಜಾಳೆ ಘಾಲುನ್ ಮಾಸೊಳ್ಯಾ ಧರುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:18
23 ತಿಳಿವುಗಳ ಹೋಲಿಕೆ  

ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.


ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.


ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:


ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ.


ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.


ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.


ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.


ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.


ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿ. ನಿಮ್ಮನ್ನು ಬೇರೆ ರೀತಿಯ ಬೆಸ್ತರನ್ನಾಗಿ ಮಾಡುವೆನು. ನೀವು ಒಟ್ಟುಗೂಡಿಸುವುದು ಮೀನನ್ನಲ್ಲ, ಮನುಷ್ಯರನ್ನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು