Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:2 - ಪರಿಶುದ್ದ ಬೈಬಲ್‌

2 ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಚಾಳಿಸ್ ದಿಸಾ ಅನಿ ಚಾಳಿಸ್ ರ್‍ಹಾತಾ ಉಪ್ಪಾಸಿ ರಾವ್ನ್ ಹೊಲ್ಲ್ಯಾ ಮಾನಾ ಜೆಜುಕ್ ಲೈ ಭುಕ್ ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:2
14 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.


ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು.


ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.


ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.


“ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು.


ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.


ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು.


ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು.


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ಮರುದಿನ ಮುಂಜಾನೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಹೋಗುತ್ತಿದ್ದನು. ಆತನಿಗೆ ಹಸಿವಾಯಿತು.


ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.


ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು