Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:23 - ಪರಿಶುದ್ದ ಬೈಬಲ್‌

23 ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:23
46 ತಿಳಿವುಗಳ ಹೋಲಿಕೆ  

ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.


ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಯೇಸು ಸಭಾಮಂದಿರದಲ್ಲಿ ಬೋಧಿಸಿದಾಗ ಜನರು ಬೆರಗಾಗಿ, “ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?


ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.


ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.


ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?


ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ಯೇಸು ಆ ಸ್ಥಳವನ್ನು ಬಿಟ್ಟು ಅವರ ಸಭಾಮಂದಿರದೊಳಕ್ಕೆ ಹೋದನು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.


ಒಂದು ಸಬ್ಬತ್‌ದಿನ ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು.


ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.


ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.


ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.


ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.


ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,


ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.


“ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು.


ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.


ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.


“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,


ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.


ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.


ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.


ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು