Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:25 - ಪರಿಶುದ್ದ ಬೈಬಲ್‌

25 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಗಾಲಿಲಿಯಾತ್ನಾ, ಧಾ ಶಾರಾನಿತ್ನಾ, ಜೆರುಜಲೆಮಾತ್ನಾ, ಜುದೆಯಾತ್ನಾ, ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಚ್ಯಾ ಜಾಗ್ಯಾತ್ನಾ ಯೆಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಜೆಜುಚ್ಯಾ ಫಾಟ್ನಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:25
11 ತಿಳಿವುಗಳ ಹೋಲಿಕೆ  

ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.


ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.


ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!


ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?


ಯೇಸುವನ್ನು ಅನೇಕ ಜನರು ಹಿಂಬಾಲಿಸಿದರು. ಯೇಸು ಅಲ್ಲಿ ರೋಗಿಗಳನ್ನು ಗುಣಪಡಿಸಿದನು.


ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.


ಯೇಸು ಬೆಟ್ಟದಿಂದ ಕೆಳಗೆ ಇಳಿದು ಬಂದನು. ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.


ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.


“ಜೆಬುಲೋನ್ ಸೀಮೆಯ, ನಫ್ತಾಲಿ ಸೀಮೆಯ, ಜೋರ್ಡನ್ನಿನ ಆಚೆ ಸೀಮೆಯ, ಸಮುದ್ರದ ಕಡೆಗಿರುವ ಸೀಮೆಯ, ಯೆಹೂದ್ಯರಲ್ಲದ ಗಲಿಲಾಯ ಸೀಮೆಯ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು