ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.
ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.
ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.
ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.
ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.
ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.
ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.