Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:12 - ಪರಿಶುದ್ದ ಬೈಬಲ್‌

12 ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕುಸಿ ಹೊವಾ ಅನಿ ಸಂತೊಸಾನ್ ರ್‍ಹಾವಾ, ಸರ್‍ಗಾತ್ ತುಮ್ಕಾ ಮೊಟೆ ಭೊಮಾನ್ ತಯಾರ್ ಕರುನ್ ಥವಲ್ಲೆ ಹಾಯ್. ತುಮ್ಚ್ಯಾನ್ಕಿ ಅದ್ದಿ ಜಿವನ್ ಕರಲ್ಲ್ಯಾ ಪ್ರವಾದ್ಯಾಕ್ನಿಬಿ ಲೊಕಾನಿ ಅಸೊಚ್ ತರಾಸ್ ದಿಲ್ಯಾನಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:12
51 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು.


ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ಪ್ರಭುವಿನಿಂದಲೇ ನಿಮಗೆ ಪ್ರತಿಫಲ ದೊರೆಯುತ್ತದೆ ಎಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಆತನು ತನ್ನ ಜನರಿಗೆ ಮಾಡಿದ ವಾಗ್ದಾನವು ನಿಮ್ಮ ನೆನಪಿನಲ್ಲಿರಲಿ.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.


ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು.


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


“ಅದು ನಿಜವಲ್ಲ, ಬಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಧಿಕಾರಿಗಳ ಬಳಿಗೆ ಕರೆದೊಯ್ದನು.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಸಹೋದರ ಸಹೋದರಿಯರೇ, ಪ್ರಭುವಿನ ಸಂದೇಶವನ್ನು ತಿಳಿಸಿದ ಪ್ರವಾದಿಗಳು ನಿಮಗೆ ಮಾದರಿಯಾಗಿರಲಿ. ಅವರು ಅನೇಕ ರೀತಿಯಲ್ಲಿ ಸಂಕಟವನ್ನು ಅನುಭವಿಸಿದರೂ ತಾಳ್ಮೆಯಿಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು