Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:13 - ಪರಿಶುದ್ದ ಬೈಬಲ್‌

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ತುಮಿ ಜಗಾಚ್ಯಾ ಲೊಕಾಕ್ನಿ ಮಿಟ್ಟ್ ಹೊತ್ತ್ಯಾ ಬಾಸೆನ್, ಖರೆ ಮಿಟ್ಟಾನ್ ಅಪ್ನಾಚಿ ರುಚಿ ಕಳ್ದುನ್ ಘೆಟ್ಲ್ಯಾನ್ ತರ್ ತೆಕಾ ಅನಿ ಪರ್ತುನ್ ರುಚಿ ಯೈಸರ್ಕೆ ಕರುಕ್ ಹೊಯ್ನಾ. ತನ್ನಾ ತೆಕಾ ಕಾಯ್ಬಿ ಕಿಮ್ಮತ್ ರ್‍ಹಾಯ್ನಾ. ತೆಚೆಸಾಟ್ನಿ ತೆ ಭಾಯ್ರ್ ಟಾಕ್ತ್ಯಾತ್ ಅನಿ ಲೊಕಾ ತೆ ತುಡ್ವುನ್ಗೆತ್ ಫಿರುನ್ ಖೆಳ್ತಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:13
8 ತಿಳಿವುಗಳ ಹೋಲಿಕೆ  

ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.


ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”


ಊಟವನ್ನು ಉಪ್ಪಿಲ್ಲದೆ ತಿನ್ನುವರೇ? ಮೊಟ್ಟೆಯ ಲೋಳೆಗೆ ರುಚಿಯಿದೆಯೇ?


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು