Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:18 - ಪರಿಶುದ್ದ ಬೈಬಲ್‌

18 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಕವ್ಡೆ ಪತರ್ ಜಗ್ ಅನಿ ಸರ್ಗ್ ಹಾಯ್, ತವ್ಡೆ ಪತರ್ ಮೊಯ್ಜೆಚ್ಯಾ ಖಾಯ್ದ್ಯಾನಿತ್ಲೆ ಎಕ್ ಅಕ್ಷಾರ್ ಹೊಂವ್ದಿ ಎಕ್ ಟಿಕ್ಕೊ ಹೊಂವ್ದಿ ಪುಸುನ್ ಜಾಯ್‌ ನಸ್ತಾನಾ ತೆನಿ ಸಾಂಗಲ್ಲೆ ಸಗ್ಳೆ ಪುರಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:18
82 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದಲ್ಲಿರುವ ಒಂದು ಚುಕ್ಕೆಯು ಬದಲಾಗುವುದಕ್ಕಿಂತಲೂ ಭೂಮ್ಯಾಕಾಶಗಳು ಅಳಿದುಹೋಗುವುದು ಸುಲಭ.


ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.


ಆದರೆ ದೇವರ ವಾಕ್ಯವು ಎಂದೆಂದಿಗೂ ಜೀವಂತವಾಗಿರುತ್ತದೆ.” ನಿಮಗೆ ಈ ವಾಕ್ಯವನ್ನೇ ತಿಳಿಸಲಾಯಿತು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ.


ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.


ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.


ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.


ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ.


ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.


ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.


ಆದ್ದರಿಂದ ಯೇಸು ಮತ್ತೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನೇ ಕುರಿಗಳಿಗೆ ಬಾಗಿಲಾಗಿದ್ದೇನೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪಾಪಮಾಡುವ ಪ್ರತಿಯೊಬ್ಬನೂ ಪಾಪಕ್ಕೆ ಗುಲಾಮನಾಗಿದ್ದಾನೆ. ಪಾಪವು ಅವನ ಯಜಮಾನನಾಗಿದೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.


ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.


ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.


ನಿನ್ನ ಆಲಯವು ಬರಿದಾಗುವುದು. ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದ!’ ಎಂದು ಹೇಳುವ ಸಮಯದ ತನಕ ನೀನು ನನ್ನನ್ನು ನೋಡುವುದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ” ಎಂದನು.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.


ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.


ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.


ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.


ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”


“ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


“ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.


ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದಲ್ಲಿ ಜೀವಿಸುತ್ತಿರುವ ನಿಮ್ಮ ಮೇಲೆ ಈ ಅಪರಾಧಗಳೆಲ್ಲಾ ಬರುತ್ತವೆ.


“ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.


“ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರವಾದಿ ತನ್ನ ಸ್ವಂತ ಊರಿನಲ್ಲಿ ಸ್ವೀಕೃತನಾಗುವುದಿಲ್ಲ.


ದೇವರ ಆಜ್ಞೆಗಳು ಶಾಶ್ವತವಾಗಿವೆ. ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ.


ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು