ಮತ್ತಾಯ 5:24 - ಪರಿಶುದ್ದ ಬೈಬಲ್24 ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತುಜಿ ಕಾನಿಕ್ ಥೈಚ್ ಅಲ್ತಾರಿಕ್ಡೆ ಸೊಡ್ ಅನಿ ತುಜ್ಯಾ ಭಾವಾಕ್ಡೆ ಜಾ ಅನಿ ತೆಚೆ ವಾಂಗ್ಡಾ ಎಕ್ ಹೊ ಅನಿ ಪರ್ತುನ್ ಯೆವ್ನ್ ತುಜಿ ಕಾನಿಕ್ ದೆವಾಕ್ ದಿ. ಅಧ್ಯಾಯವನ್ನು ನೋಡಿ |
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.