ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.
ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, “ವಿವಾಹವಿಚ್ಪೇದನೆಯನ್ನು ನಾನು ಹಗೆ ಮಾಡುತ್ತೇನೆ. ಮತ್ತು ಮನುಷ್ಯನು ಮಾಡುವ ದುಷ್ಕೃತ್ಯವನ್ನು ನಾನು ಹಗೆ ಮಾಡುತ್ತೇನೆ. ಆದ್ದರಿಂದ ನಿಮ್ಮ ಆತ್ಮೀಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿರಿ. ನಿಮ್ಮ ಹೆಂಡತಿಯರಿಗೆ ಮೋಸ ಮಾಡಬೇಡಿರಿ.”