32 ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.
32 ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
32 ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”
32 ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.
32 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.
ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.
“ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.
ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.