Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:44 - ಪರಿಶುದ್ದ ಬೈಬಲ್‌

44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಚ್ಯಾ ದುಸ್ಮನಾಚೊ ಪ್ರೆಮ್ ಕರಾ, ಅನಿ ತುಮ್ಕಾ ತರಾಸ್ ದಿತಲ್ಯಾಚ್ಯಾಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:44
21 ತಿಳಿವುಗಳ ಹೋಲಿಕೆ  

ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.


ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,


ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ.


ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.


“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು