ಮತ್ತಾಯ 5:7 - ಪರಿಶುದ್ದ ಬೈಬಲ್7 ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ದುಸ್ರ್ಯಾಂಚ್ಯಾ ವರ್‍ತಿ ದಯಾ ದಾಕ್ವುತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಚಿ ದಯಾ ಕರ್‍ತಾ! ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು.