ಮತ್ತಾಯ 6:10 - ಪರಿಶುದ್ದ ಬೈಬಲ್10 ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಜೊ ರಾಜ್ ಯೆಂವ್ದಿತ್; ಕಶೆ ಸರ್‍ಗಾ ವರ್‍ತಿ ಸಗ್ಳೆ ತುಜ್ಯಾ ಮನಾ ಸರ್ಕೆ ಹೊತಾ, ತಸೆಚ್ ಹ್ಯಾ ಜಗಾತ್‍ಬಿ ಹೊಂವ್ದಿತ್. ಅಧ್ಯಾಯವನ್ನು ನೋಡಿ |
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.