ಮತ್ತಾಯ 6:13 - ಪರಿಶುದ್ದ ಬೈಬಲ್13 ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಲೈ ಕಟಿನ್ ಪರಿಕ್ಷಾತ್ ಅಮ್ಕಾ ಘಾಲುನಕೊ, ಸೈತಾನಾಕ್ನಾ ಅಮ್ಕಾ ರಾಕ್”. ಅಧ್ಯಾಯವನ್ನು ನೋಡಿ |
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.