Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:19 - ಪರಿಶುದ್ದ ಬೈಬಲ್‌

19 “ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 “ಹಿತ್ತೆ ಹ್ಯಾ ಜಗಾತ್ ತುಮ್ಚೆಸಾಟ್ನಿ ಬದಿಕ್ ಗೊಳಾ ಕರುನ್ ಥವ್ನಕಾಶಿ, ಹಿತ್ತೆ ತೆಕಾ ವಾಳ್ಟಿ ಲಾಗ್ತಾ ಅನಿ ಜಂಗ್‍ಲಾಗುನ್ ಹಾಳ್ ಹೊವ್ನ್ ಜಾತಾ, ಅನಿ ಚೊರಾ ಘರಾ ಫೊಡುನ್ ಕಾಡುನ್ ಚೊರುನ್ ಘೆವ್ನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:19
23 ತಿಳಿವುಗಳ ಹೋಲಿಕೆ  

ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.


ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ!


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


“ನಾನು ನನ್ನ ಐಶ್ವರ್ಯಗಳಲ್ಲಿ ಎಂದೂ ಭರವಸವಿಡಲಿಲ್ಲ. ನಾನು ಬಂಗಾರಕ್ಕೆ ‘ನೀನೇ ನನ್ನ ನಿರೀಕ್ಷೆ’ ಎಂದು ಹೇಳಲೇ ಇಲ್ಲ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.


ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.


ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.


“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು