Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:2 - ಪರಿಶುದ್ದ ಬೈಬಲ್‌

2 “ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತೆಚೆಸಾಟ್ನಿ ಕನ್ನಾಬಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ತುಮಿ ಕಾಯ್ಬಿ ದಿತಾನಾ, ಕುಸ್ಡ್ಯಾ ಲೊಕಾನಿ ಲೊಕಾಕ್ನಿ ದಾಕ್ವುಕ್ ಮನುನ್ ಸಿನಾಗೊಗಾತ್ನಿ ಅನಿ ವನಿಯಾತ್ನಿ ಕರ್‍ಲ್ಯಾ ಸರ್ಕೆ ಕರುನಕಾಸಿ. ತೆನಿ ಅಶೆ ಕರಲ್ಲ್ಯಾ ತನ್ನಾ ತಿ ಮಾನ್ಸಾ ತೆಂಕಾ ಹೊಗಳ್ತ್ಯಾತ್. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಗಾವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:2
56 ತಿಳಿವುಗಳ ಹೋಲಿಕೆ  

“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.


ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


“ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.


ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ.


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!


ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?


ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


“ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ.


ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ.


ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?


ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.


ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.


ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು