Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:20 - ಪರಿಶುದ್ದ ಬೈಬಲ್‌

20 ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಪರಲೋಕದಲ್ಲಿ ಗಂಟು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವದೂ ಇಲ್ಲ, ಕದಿಯುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆಮನುನ್, ಸರ್‍ಗಾ ವರ್‍ತಿ ತುಮ್ಚೆ ಬದಿಕ್ ಗೊಳಾ ಕರುನ್ ಥವಾ, ಥೈ ವಾಳ್ಟಿ ಲಾಗಿನಾ ಅನಿ ಜಂಗ್‍ಲಾಗುನ್ ಹಾಳ್ ಹೊಯ್ನಾ, ಅನಿ ಚೊರಾನಿ ಫೊಡುನ್ ಕಾಡುನ್ ಚೊರುನ್ ಘೆವ್ನ್ ಜಾವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:20
14 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.


“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.


ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು