ಮತ್ತಾಯ 6:24 - ಪರಿಶುದ್ದ ಬೈಬಲ್24 “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 “ಕೊನ್ಬಿ ಎಕ್ಲ್ಯಾನ್ ದೊನ್ ಧನಿಯಾಂಚಿ ಸೆವಾ ಕರುಕ್ ಹೊಯ್ನಾ; ತೊ ಎಕ್ಲ್ಯಾಚೊ ಪ್ರೆಮ್ ಕರ್‍ತಾ ಅನಿ ಅನಿಎಕ್ಲ್ಯಾಚೊ ರಾಗ್ ಕರ್‍ತಾ; ಎಕ್ಲ್ಯಾಚಿ ತೊ ಬರಿ ಕರುನ್ ಸೆವಾ ಕರ್‍ತಾ, ಅನಿ ಅನಿಎಕ್ಲ್ಯಾಚಿ ಬರಬ್ಬರ್ ಸೆವಾ ಕರಿನಾ. ತುಮಿ ದೆವಾಚಿ ಅನಿ ಪೈಸ್ಯಾಂಚಿ ದೊಗ್ಯಾಂಚಿಬಿ ಸೆವಾ ಕರುಕ್ ಹೊಯ್ನಾ”. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.